Ticker

6/recent/ticker-posts

ಮುಂಡಗೋಡದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ದ್ರಾವಣ ಸಿಂಪರಣೆ

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕು ಆಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಟ್ಟಣ ಪಂಚಾಯಿತಿ ಹಾಗೂ ಅಗ್ನಿಶಾಮಕ ದಳದವರ ಸಹಯೋಗದಲ್ಲಿ, ಮುಂಡಗೋಡ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಂಗಳವಾರ ಸ್ಯಾನಿಟೈಸ್ ಮಾಡಲಾಯಿತು. 
ತಹಶೀಲ್ದಾರ್ ಶ್ರೀಧರ ಮುಂದಲಮನಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ಸುಮಾರು ನಾಲ್ಕು ಗಂಟೆಗಳ ಕಾಲ, ಪಟ್ಟಣದ ಬಸ್ ನಿಲ್ದಾಣ ರಸ್ತೆ, ಬಂಕಾಪುರ ರಸ್ತೆ, ಯಲ್ಲಾಪುರ ರಸ್ತೆಗಳಲ್ಲಿ ದ್ರಾವಣವನ್ನು ಸಿಂಪಡಿಸಿದರು. 
ಈ ಸಂದರ್ಭದಲ್ಲಿ ಪ.ಪಂ.ಮುಖ್ಯಾಧಿಕಾರಿ ಸಂಗನಬಸಯ್ಯ, ತಾಲೂಕಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಚ್.ಎಫ್.ಇಂಗಳೆ, ಸಿ.ಪಿ.ಐ ಪ್ರಭುಗೌಡ ಕಿರೇದಳ್ಳಿ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. 
ಮಧ್ಯಾಹ್ನದ ನಂತರ ಸಣ್ಣ ಸಣ್ಣ ಓಣಿಗಳಲ್ಲಿ ಸಿಂಪರಣೆ ಕಾರ್ಯವನ್ನು ಪಟ್ಟಣ ಪಂಚಾಯಿತಿ ವತಿಯಿಂದ ಮಾಡಲಾಯಿತು. ಟಿಬೆಟಿಯನ್ ಕ್ಯಾಂಪಿನಿಂದ ತರಿಸಿದ ಸಿಂಪರಣೆ ವಾಹನವನ್ನು ಬಳಸಿಕೊಂಡು, ಸಣ್ಣ ಓಣಿಗಳಲ್ಲಿ ಸ್ಯಾನಿಟೈಸ್ ಮಾಡುವ ಕೆಲಸ ಭರದಿಂದ ಸಾಗಿತು