Ticker

6/recent/ticker-posts

ಇಂದಿರಾ ಕ್ಯಾಂಟೀನನಲ್ಲಿ ಉಚಿತ ಉಪಹಾರ


  • ಸಾಂದರ್ಭಿಕ ಚಿತ್ರ
ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಕಾರ್ಮಿಕರು, ಬಡವರು, ವಲಸೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಹಸಿವಿನಿಂದ ಬಳಲಬಾರದು ಎಂದು ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಉಪಹಾರ ನೀಡಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಮುಂಡಗೋಡ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಇಂದಿರಾ ಕ್ಯಾಂಟೀನನಲ್ಲಿ ಕೂಲಿಕಾರ್ಮಿಕರಿಗೆ, ವಲಸೆಗಾರರಿಗೆ ಹಾಗೂ ದುರ್ಬಲ ವರ್ಗದವರಿಗೆ ಉಚಿತವಾಗಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿಯ ಉಪಹಾರ ವನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂಗನಬಸಯ್ಯ ತಿಳಿಸಿದ್ದಾರೆ.