Ticker

6/recent/ticker-posts

ಜೂನ ಅಂತ್ಯದವರೆಗೆ ಲಾಕ್ ಡೌನ್, ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ...!


ಮುಂಡಗೋಡ:ಈಗಾಗಲೇ ಜೂನ.7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ವಾರದಲ್ಲಿ ನಾಲ್ಕು ದಿನ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಲಾಗಿದೆ. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಖರೀದಿಗೂ ಅವಕಾಶ ನೀಡಲಾಗಿದೆ. ಆದರೆ ಕಂಟೈನ್ ಮೆಂಟ್ ಪ್ರದೇಶಗಳಲ್ಲಿ ವ್ಯಾಪಾರಸ್ಥರು ಗ್ರಾಹಕರ ಮನೆ ಬಾಗಿಲಿಗೆ ಅಗತ್ಯ ಸಾಮಗ್ರಿ ತಲುಪಿಸಲು ಮುಂದಾಗಿರುವುದು, ಸ್ವಾಗತಾರ್ಹ ಕ್ರಮವಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಮುಂಡಗೋಡ ಕೋವಿಡ್ ಕೇರ್ ಸೆಂಟರಗೆ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿ.ಪಂ‌.ಸಿಇಒ ಪ್ರಿಯಾಂಗಾ ಇದ್ದರು.

ಕೇಂದ್ರ ಸರ್ಕಾರ ಜೂ.30ರ ವರೆಗೆ ಲಾಕ್ ಡೌನ್ ವಿಸ್ತರಣೆಗೆ ಸೂಚಿಸಿದೆಯಲ್ಲ ಎಂದು ಪತ್ರಕರ್ತರು ಕೇಳಿದಾಗ, ಈ ಕುರಿತು ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ. ಕೇಂದ್ರದ ನಿರ್ಧಾರವನ್ನು ಯಾವ ರೀತಿಯಲ್ಲಿ ಅರ್ಥೈಸಿ, ಯಾವ ನಿರ್ಧಾರ ಅಥವಾ ಆದೇಶ ನೀಡುತ್ತಾರೋ ಕಾದು ನೋಡಬೇಕಿದೆ ಎಂದು ಸಚಿವ ಹೆಬ್ಬಾರ್ ಹೇಳಿದರು. 
ಕೇಂದ್ರವೂ ಕೂಡಾ ಹಲವು ಸಂದರ್ಭದಲ್ಲಿ ನಿರ್ದೇಶನ ನೀಡುತ್ತಾ  ಬಂದಿದೆ. ರಾಜ್ಯಗಳ ಪರಿಸ್ಥಿತಿ ಅವಲೋಕಿಸಿ  ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದರು.