Ticker

6/recent/ticker-posts

ಶಿರಸಿಗೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಿ

ಮುಂಡಗೋಡ:ಕೋವಿಡ್ ಪರೀಕ್ಷೆ ಹೆಚ್ಚಿಸಲು ಹಾಗೂ ಸೋಂಕಿತರ ಬಗ್ಗೆ ತ್ವರಿತವಾಗಿ ತಿಳಿಯಲು ಅನುಕೂಲವಾಗಲು ಜಿಲ್ಲೆಯ ಶಿರಸಿಗೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯವನ್ನು ಮಂಜೂರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚೆಗೆ ಕಾರ್ಸಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಶಿರಸಿಯಲ್ಲಿ ಆರ್.ಟಿ.ಪಿ.ಸಿ.ಆರ್. ಪ್ರಯೋಗಾಲಯವನ್ನು ಸ್ಥಾಪಿಸುವಂತೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ  ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರಲ್ಲಿ ಮನವಿ ಮಾಡಿದ್ದರು. ಶಿರಸಿಯ   ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಸ್ಥಾಪಿಸುವುದಕ್ಕೆ  ಅನುಮತಿ ನೀಡಿ ಬೇಡಿಕೆ ಈಡೇರಿಸಿದಂತಾಗಿದೆ. 


 ತಮ್ಮ ಮನವಿಗೆ ರಾಜ್ಯ ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ರಾಜ್ಯ ಸರ್ಕಾರವನ್ನು ಅಭಿನಂದಿಸಿದ್ದಾರೆ.   

ನೂತನ ಪ್ರಯೋಗಾಲದಿಂದಾಗಿ ಕೋವಿಡ್ ಸೋಂಕು ಪತ್ತೆ ಪರೀಕ್ಷೆಯ ವರದಿ ಶೀಘ್ರವಾಗಿ ದೊರೆಯುತ್ತದೆ ಹಾಗೂ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಯಲ್ಲಾಪುರ, ಮುಂಡಗೋಡ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ ಹಾಗೂ ಜೊಯಿಡಾ ತಾಲೂಕುಗಳಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ.