Ticker

6/recent/ticker-posts

ಶ್ರಮಿಕರಿಗೆ ನೆರವು ನೀಡಲು ಮುಂದಾದ ಬಿಜೆಪಿ ಯುವಮೋರ್ಚಾ! ಕಾರ್ಯಕ್ರಮ ಉದ್ಘಾಟಿಸಿದ ವಿವೇಕ ಹೆಬ್ಬಾರ್

ಮುಂಡಗೋಡ:ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಬಿಜೆಪಿ ಸರ್ಕಾರ ಸಹಾಯಧನ ಘೋಷಿಸಿದ್ದು, ಅರ್ಹರು ಅರ್ಜಿ ಸಲ್ಲಿಸಲು ಸಹಾಯವಾಗಲು, ತಾಲೂಕಾ ಬಿಜೆಪಿ ಯುವ ಮೋರ್ಚಾ ಘಟಕದವರು ಶ್ರಮಿಕರಿಗೆ ನೆರವು ಕಾರ್ಯಕ್ರಮವನ್ನು ಗುರುವಾರ ಆಯೋಜಿಸಿದ್ದರು. 


ಯುವ ಮುಖಂಡ ವಿವೇಕ್ ಹೆಬ್ಬಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಬಿಜೆಪಿ ಸರ್ಕಾರ ಲಾಕ್‍ಡೌನ್ ಸಮಯದಲ್ಲಿ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿರುವ ವಿವಿಧ ವಲಯದ ಕಾರ್ಮಿಕರಿಗೆ ಸಹಾಯಧನ ನೀಡುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಬಿಜೆಪಿ ಯುವ ಮೋರ್ಚಾದವರು, ನೆರವು ನೀಡಲು ಮುಂದಾಗಿರುವುದು ಒಳ್ಳೆಯ ಕೆಲಸ ಎಂದು ವಿವೇಕ್ ಹೆಬ್ಬಾರ್ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗಭೂಷಣ ಹಾವಣಗಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಯುವಮೋರ್ಚಾ ತಾಲೂಕು ಅಧ್ಯಕ್ಷ ಗಣೇಶ ಶಿರಾಲಿ, ಪಟ್ಟಣ ಪಂಚಾಯತ ಉಪಾಧ್ಯಕ್ಷ ಮಂಜುನಾಥ ಹರಮಲಕರ್, ಮುಖಂಡರಾದ ಉಮೇಶ ಬಿಜಾಪುರ, ಗುರುರಾಜ ಕಾಮತ್, ಸಂಜೀವ ಪಿಸೆ, ರವಿ ಹಾವೇರಿ ಮುಂತಾದವರು ಉಪಸ್ಥಿತರಿದ್ದರು.