Ticker

6/recent/ticker-posts

ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳ ಸಭೆ ನಡೆಸಿದ ಸಚಿವ ಶಿವರಾಮ ಹೆಬ್ಬಾರ್

ಮುಂಡಗೋಡ:ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಕೋವಿಡ್ - 19 ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು, ಸೋಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಎಂ.ಪಿ. ಮುಲೈ ಮುಹಿಲನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಪ್ರಿಯಾಂಗಾ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.