ಮುಂಡಗೋಡ:ಕೊರೊನಾ ಸೋಂಕಿತರ ಸಂಖ್ಯೆ ಒಂದಂಕಿಯಲ್ಲಿಯೇ ಮುಂದುವರೆದಿದ್ದು, ಮಂಗಳವಾರ ತಾಲೂಕಿನ 8 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಜೂನ.22ರವರೆಗೆ ಒಟ್ಟು 3950 ಜನರಿಗೆ ಕೊರೊನಾ ಸೋಂಕು ತಗುಲಿದೆ. ಅದರಲ್ಲಿ 3796 ಜನರು ಗುಣಮುಖರಾಗಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಖಾಲಿಯಾಗಿದ್ದ ಕೋವಿಡ್ ಕೇರ್ ಸೆಂಟರನಲ್ಲಿ ಒಬ್ಬರು ಸೋಂಕಿತರು ದಾಖಲಾಗುವ ಮೂಲಕ, ಮತ್ತೆ ಕೋವಿಡ್ ಕೇರ್ ಸೆಂಟರ ಆರಂಭವಾಗಿದೆ.
ಮುಂಡಗೋಡ ತಾಲೂಕಿನಲ್ಲಿ ಸದ್ಯ 81 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 35 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 45 ಜನರು ಹೋಂ ಐಸೋಲೇಷನ್ ನಲ್ಲಿದ್ದಾರೆ. ಒಂದನೇ ಅಲೆ ಹಾಗೂ ಎರಡನೇ ಅಲೆ ಸೇರಿ ಒಟ್ಟು 73 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.

ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು