ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರ ತಾಲೂಕಿನ ಕಿರವತ್ತಿ ಹಾಗೂ ಹುಣಶೆಟ್ಟಿಕೊಪ್ಪ ಗ್ರಾಮಗಳಲ್ಲಿ 'ಹೆಬ್ಬಾರ್ ರೇಷನ್ ಕಿಟ್' ವಿತರಣಾ ಕಾರ್ಯಕ್ಕೆ ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು, 'ಯಲ್ಲಾಪುರ ಕ್ಷೇತ್ರದ ಬಡಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ, ವೈಯಕ್ತಿಕವಾಗಿ ಆಹಾರ ಸಾಮಗ್ರಿಗಗಳ ಕಿಟ್ ನೀಡಲಾಗುತ್ತಿದೆ. ಕಿಟ್ ವಿತರಣೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಕೈಜೋಡಿಸಿದ್ದಾರೆ. ಸಾಂಕೇತಿಕವಾಗಿ ಇಂದು ಚಾಲನೆ ನೀಡಿದ್ದು, ಕ್ಷೇತ್ರದ 63 ಸಾವಿರ ಫಲಾನುಭವಿಗಳ ಇದರ ಪ್ರಯೋಜನ ಪಡೆಯಲಿದ್ದಾರೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಅವರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಚಿವರ ಜನಪರ ಕಾರ್ಯವನ್ನು ಮೆಚ್ಚಿ, ಕ್ಷೇತ್ರದ ಜನರ ಕಾಳಜಿ ವಹಿಸುತ್ತಿರುವ ಸಚಿವರ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ನಾಯಕ, ಜಿಲ್ಲಾಪ್ರಧಾನ ಕಾರ್ಯದರ್ಶಿಗಳಾದ ಗೋವಿಂದ ನಾಯ್ಕ, ಯುವ ನಾಯಕ ವಿವೇಕ್ ಹೆಬ್ಬಾರ್, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ್, ಪ್ರಮುಖರಾದ ವಿಜಯ ಮಿರಾಶಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.



ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು