Ticker

6/recent/ticker-posts

ಮದುವೆಗೆ 20 ಜನರು ಪಾಲ್ಗೊಳ್ಳಬಹುದು, ಬೆಳಿಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಎಲ್ಲ ಅಂಗಡಿಮುಂಗಟ್ಟು ತೆರೆಯಬಹುದು

ಮುಂಡಗೋಡ:ಜೂನ 21ರಿಂದ ಜುಲೈ 5ರ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಲಾಕ್ 2.0 ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶದೊಂದಿಗೆ ಜಿಲ್ಲೆಗೆ ಅನ್ವಯವಾಗುವಂತೆ ಕೆಲವು ಹೆಚ್ಚುವರಿ ನಿಬಂಧನೆಗಳನ್ನು ವಿಧಿಸಲು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸೂಚಿಸಿದ್ದಾರೆ. ಅದರಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಅವರು ಪರಿಷ್ಕøತ ಆದೇಶವನ್ನು ರವಿವಾರ ಹೊರಡಿಸಿದ್ದಾರೆ. 


ಈ ದಿನಗಳಲ್ಲಿ ಪ್ರತಿದಿನ ರಾತ್ರಿ ಕಫ್ರ್ಯೂ, ವಾರಾಂತ್ಯದ ಕಫ್ರ್ಯೂ ಜಾರಿಯಲ್ಲಿರುತ್ತದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 5ಗಂಟೆವರೆಗೆ ಹೋಟೆಲ್, ರೆಸ್ಟೊರೆಂಟ್, ಬಾರ್ ಮತ್ತು ಕ್ಲಬ್ ಗಳು ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದಂತೆ ಶೇ.50 ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 

ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಕೇವಲ 20 ಜನರಿಗೆ ಮಾತ್ರ ನಿರ್ಬಂಧಿಸಿ ಅನುಮತಿ ನೀಡಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದ ತಹಶೀಲ್ದಾರರಿಂದ ಅನುಮತಿ ಪಡೆಯತಕ್ಕದ್ದು. ಉಲ್ಲಂಘಿಸಿದವರ ಮೇಲೆ ಎಫ್.ಆಯ್.ಆರ್ ದಾಖಲಿಸುವುದು ಹಾಗೂ ಮದುವೆ ಕಾರ್ಯಕ್ರಮದಲ್ಲಿ ಹಾಜರಾಗುವ ಜನರ ಆರೋಗ್ಯದ ಮೇಲೆ ನಿಗಾ ಇಡುವುದು ಜಿಲ್ಲಾಡಳಿತದ ಕರ್ತವ್ಯವಾಗಿದ್ದು, ಸ್ಥಳೀಯ ಆಡಳಿತಗಳು ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಕ್ರಮವಹಿಸಬೇಕು. 

ತಾಲ್ಲೂಕಿನಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಂತ ಪ್ರದೇಶಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ಆಯಾ ತಹಶೀಲ್ದಾರರು ತಂದು ಅವರ ಅನುಮತಿಯೊಂದಿಗೆ ಮೈಕ್ರೋ ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಿ ಸಂಪೂರ್ಣ ಲಾಕ್ ಡೌನ್ ಮಾಡಲು ಆದೇಶದಲ್ಲಿ ತಿಳಿಸಲಾಗಿದೆ.  

 ಉತ್ತರ ಕನ್ನಡ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ