Ticker

6/recent/ticker-posts

ಕ್ರಿಮಿನಾಶಕ ಸೇವಿಸಿದ್ದ ಯುವಕ ಸಾವು..!!

ಮುಂಡಗೋಡ:ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ  ಯುವಕ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿ ಕಿಮ್ಸ್ ನಲ್ಲಿ ಮೃತಪಟ್ಟ ಘಟನೆ ಶನಿವಾರ ಜರುಗಿದೆ.

ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಶಾಂತ ಭದ್ರಪ್ಪ ತೆಪ್ಪದವರ(25) ಮೃತಪಟ್ಟ ಯುವಕನಾಗಿದ್ದಾನೆ.

ಮೂಲತಹ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಲಗಡ್ಡಿ ಗ್ರಾಮದವನಾಗಿದ್ದ ಯುವಕನು ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಹಾಲಿ ವಸ್ತಿಯಾಗಿದ್ದ.
ಜುಲೈ.23ರಂದು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಕ್ರಿಮಿನಾಶಕ ಸೇವಿಸಿ ಅಸ್ವಸ್ಥನಾಗಿದ್ದನು. ಕೂಡಲೇ ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ತಂದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿತ್ತು.
ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.