Ticker

6/recent/ticker-posts

ಹೈಕಮಾಂಡ್ ಸೂಚಿಸಿದವರೇ ಮುಂದಿನ ಮುಖ್ಯಮಂತ್ರಿ..!ಬಿ.ಕೆ.ಹರಿಪ್ರಸಾದ್

ಮುಂಡಗೋಡ:'ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಪಕ್ಷದಲ್ಲಿರುವ ನಾಯಕರ ಅಭಿಮಾನಿಗಳು, ತಮ್ಮ ನಾಯಕರ ಬಗ್ಗೆ ಮುಂದಿನ ಮುಖ್ಯಮಂತ್ರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಅದರಲ್ಲಿ ತಪ್ಪಿಲ್ಲ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಹೇಳಿದರು.

ಶಿರಸಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹುಬ್ಬಳ್ಳಿಗೆ ಹೋಗುವ ಮಾರ್ಗಮಧ್ಯೆ, ಮುಂಡಗೋಡದ ಶಿವಾಜಿ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿ.ಕೆ.ಹರಿಪ್ರಸಾದ ಅವರನ್ನು ಸ್ವಾಗತಿಸಿದರು.

ಬ್ಕಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಹಿರೇಹಳ್ಳಿ ಹಾಗೂ ಮುಖಂಡರು ಬಿ.ಕೆ.ಹರಿಪ್ರಸಾದ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿದರು. 

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಹೊಳೆ ದಾಟಿ ದಡ ಮುಟ್ಟಿದ ನಂತರವಷ್ಟೇ, ಮುಂದಿನದನ್ನು ವಿಚಾರ ಮಾಡಬೇಕಷ್ಟೇ ಎಂದು ಮಾರ್ಮಿಕವಾಗಿ ಹೇಳಿ, ಮುಂದಿನ ಮುಖ್ಯಮಂತ್ರಿಗೆ ಜಯವಾಗಲಿ ಎಂದು ಕರೆಯಿಸಿಕೊಳ್ಳುತ್ತಿರುವ ನಾಯಕರಿಗೆ ಪರೋಕ್ಷವಾಗಿ ಟೀಕಿಸಿದರು. ಸೋನಿಯಾ ಗಾಂದಿ ಹಾಗೂ ರಾಹುಲ್ ಗಾಂದಿ ಅವರೇ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಶಾಸಕರಾದ ನಂತರವಷ್ಟೇ ಮುಖ್ಯಮಂತ್ರಿ ವಿಚಾರ ಬರುತ್ತದೆ ಎಂದರು.