ಮುಂಡಗೋಡ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪಟ್ಟಣದ ಕೆಂಪಟ್ಟಿ ಏರಿ ಸನಿಹ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.
ಅಪಘಾತದಲ್ಲಿ ತಾಲೂಕಿನ ಮಜ್ಜಿಗೇರಿ ಗ್ರಾಮದ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಬಂದ ಅಂಬುಲೆನ್ಸ ಮೂಲಕ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ.
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು