ಮುಂಡಗೋಡ:ಜೀವನದಲ್ಲಿ ಜಿಗುಪ್ಸೆ ಹೊಂದಿ, ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಸೋಮವಾರ ಜರುಗಿದೆ.
ಶಂಕ್ರಪ್ಪ ಸೋಮಲಿಂಗಪ್ಪ ಕೆಂಗನೂರ(48) ಮೃತ ದುರ್ದೈವಿ ಆಗಿದ್ದಾರೆ.
ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಮನೆಯ ಹಿಂದಿನ ಹಕ್ಕಿ ಮನೆಯ ಎಳೆಗೆ ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶಂಕ್ರಪ್ಪನ ಮಗ ಮಂಜುನಾಥ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು