ಮುಂಡಗೋಡ:ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯು 108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ನಡೆದಿದೆ.
ತಾಲೂಕಿನ ಯರೇಬೈಲ್ ಗ್ರಾಮದ ಪವಿತ್ರಾ ಮಂಜುನಾಥ ಶೆರೆವಾಡ(23) ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ.
108 ವಾಹನದ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಬಳೂರು ತುರ್ತು ಚಿಕಿತ್ಸೆ ನೀಡಿದರು. ಚಾಲಕ ಪ್ರಕಾಶ ಬಾಗೇವಾಡಿ ಇದ್ದರು.
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು