Ticker

6/recent/ticker-posts

ಗಂಡನ ಕಿರುಕುಳಕ್ಕೆ ನೇಣಿಗೆ ಶರಣಾದ ಗರ್ಭಿಣಿ ಚೇತನಾ..!!

 


ಮುಂಡಗೋಡ:ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿಯು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬಾಚಣಕಿ ಗ್ರಾಮದಲ್ಲಿ  ಸಂಭವಿಸಿದೆ. ಚೇತನಾ ಗುತ್ತೆಪ್ಪ ಸಣ್ಮನಿ(32) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರು ತಿಂಗಳ ಗರ್ಭಿಣಿಯಾಗಿದ್ದು ಸೋಮವಾರ ನೇಣಿಗೆ ಶರಣಾಗಿದ್ದಾಳೆ. 

ಈಕೆಯ ಪತಿ ಗುತ್ತೆಪ್ಪನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದನಂತೆ. ಇದರಿಂದ ಮನನೊಂದು ಗರ್ಭಿಣಿಯು ಸೀರೆಯಿಂದ ಮನೆಯ ಜಂತಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್‌ಐ ಬಸವರಾಜ ಮಬನೂರು ಭೇಟಿ ನೀಡಿ ಪರಿಶೀಲಿಸಿದರು. ಈ ಪ್ರಕರಣದಲ್ಲಿ ಪತಿ ಗುತ್ತೆಪ್ಪನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ