Ticker

6/recent/ticker-posts

ಪಾಳಾ ಗ್ರಾಮ ಪಂಚಾಯತ ಸದಸ್ಯೆಯ ಕೊಲೆ..!!ಗಂಡನೇ ಕೊಲೆ ಮಾಡಿರುವ ಶಂಕೆ..!!!

 


ಮುಂಡಗೋಡ:ಗ್ರಾಮ ಪಂಚಾಯತ ಸದಸ್ಯೆ ಅಕ್ಕಮ್ಮ ಬಸವರಾಜ ಮೇಲಿನಮನಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಗಂಡನೇ ಕೊಲೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 

ಮೃತ ಸದಸ್ಯೆಯು ಕಾಂಗ್ರೆಸ್ ಬೆಂಬಲಿತ ಸದಸ್ಯೆಯಾಗಿದ್ದಾಳೆ. ಮನೆಯ ಆವರಣದಲ್ಲಿಯೇ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಮಧ್ಯರಾತ್ರಿ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ ಮಬನೂರ ಭೇಟಿ ನೀಡಿದ್ದಾರೆ. 


ಮೃತದೇಹದ ಸುತ್ತಲೂ ಕುಂಕುಮ ಚೆಲ್ಲಲಾಗಿದ್ದು, ಮನೆಯ ಒಳಗೆ ಹಾಗೂ ಹೊರಗೆ ಚುನಾವಣಾ ಕರಪತ್ರಗಳನ್ನು ಇಟ್ಟು ಅವುಗಳ ಮೇಲೆ ಹುಲ್ಲು, ಕುಂಕುಮ ಇಡಲಾಗಿದೆ. ವಾಮಾಚಾರಕ್ಕಾಗಿ ನಡೆದ ಕೊಲೆಯೋ ಅಥವಾ ಇನ್ಯಾವುದೋ ಕಾರಣಕ್ಕೆ ನಡೆದ ಕೊಲೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.