ಕಳೆದ ಒಂದು ವಾರದಿಂದ ಮಾಜಿ ಶಾಸಕ ವಿ.ಎಸ್.ಪಾಟೀಲ ಕಾಂಗ್ರೆಸ್ ಪಕ್ಷ ಸೇರುವ ಇಂಗಿತವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು. ಅಲ್ಲದೇ, ಬಿಜೆಪಿ ಪಕ್ಷಕ್ಕೆ ಬಂದಿರುವ ವಲಸಿಗರಿಂದ ತಮಗೆ ಹಾಗೂ ತಮ್ಮನ್ನು ನಂಬಿರುವ ಕಾರ್ಯಕರ್ತರಿಗೆ ಅನ್ಯಾಯ ಮಾಡಲಾಗಿದೆ. ಇದರಿಂದ ಬೇಸತ್ತು ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುವುದಾಗಿ ವಿ.ಎಸ್.ಪಾಟೀಲ ಹೇಳಿದ್ದರು.
ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ ಅವರನ್ನು ಮನವೊಲಿಸಲು ಬಿಜೆಪಿ ರಾಜ್ಯ ಮುಖಂಡರು ಪ್ರಯತ್ನಿಸಿದ್ದರು. ಆದರೂ, ವಿ.ಎಸ್.ಪಾಟೀಲ ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದಾಗ ಅನಿವಾರ್ಯವಾಗಿ ಪಾಟೀಲರ ಅಧ್ಯಕ್ಷ ಹುದ್ದೆಯನ್ನು ತಕ್ಷಣಕ್ಕೆ ಜಾರಿಯಾಗುವಂತೆ ಹಿಂಪಡೆಯಲಾಗಿದೆ. ಈ ಮೂಲಕ ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಮೂಲ ಹಾಗೂ ವಲಸಿಗರ ರಾಜಕಾರಣ ಮತ್ತೊಂದು ಮಜಲು ಸೇರಲು ಮುನ್ನುಡಿ ಬರೆದಂತಾಗಿದೆ.


ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು