Ticker

6/recent/ticker-posts

ಮುರುಘಾಮಠದ ಘಟನೆ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ..!!

 


ಮುಂಡಗೋಡ:ಅಪ್ರಾಪ್ತೆ ಬಾಲಕಿಯರ ಮೇಲೆ  ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಲು ವಿಳಂಬ ಮಾಡಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯವರು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರು   ಅಪ್ರಾಪ್ತ ಬಾಲಕಿಯರ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ಕುರಿತು ಪೋಕ್ಸೋ ಕಾಯಿದೆಯಡಿ ದೂರು ದಾಖಲಾಗಿದೆ. ಘಟನೆ ಬೆಳಕಿಗೆ ಬಂದು ಒಂದು ವಾರ ಕಳೆದರೂ ಚಿತ್ರದುರ್ಗ ಪೊಲೀಸರು ಆರೋಪಿಯನ್ನು ಬಂಧಿಸದೆ, ಆರೋಪಿ ಸ್ಥಾನದಲ್ಲಿರುವ ಸ್ವಾಮೀಜಿಗೆ ಪೊಲೀಸರು ರಕ್ಷಣೆ ನೀಡಿ ಕಾಲ ಹರಣ ಮಾಡಿರುವುದನ್ನು ದಲಿತ ಸಂಘರ್ಷ ಮಹಿಳಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಪಟ್ಟಣದ  ಪರಿವೀಕ್ಷಣಾ ಮಂದಿರದಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. 

 ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನೆ ಸಂಚಾಲಕ ಎಸ್.ಫಕ್ಕೀರಪ್ಪ ಮಾತನಾಡಿ, ಸ್ವಾಮೀಜಿಗಳು ತಮ್ಮ ಮೇಲೆ ಆಪಾದನೆ ಬಂದಾಗ ತಾವೇ ಶರಣಾಗಬೇಕು.  ಬಾಲಕಿಯರನ್ನು ಶಿಕ್ಷಣದ ಸೋಗಿನಲ್ಲಿ  ಇಟ್ಟುಕೊಂಡು ಪ್ರತಿದಿನ ಸರದಿಯಂತೆ ವಿದ್ಯಾರ್ಥಿನಿಯರಿಗೆ ಕರೆದು ಏಕಾಂತ ಸೇವೆಯ ನೆಪದಲ್ಲಿ ಅತ್ಯಾಚಾರ ಮಾಡಿದ್ದಾರೆಂದು ಅವರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ.  ಪೂಜ್ಯ ಭಾವನೆಯಿಂದ ಕಾಣುತ್ತಿರುವ  ಕಾವಿಧಾರಿ ಸ್ವಾಮಿಗಳನ್ನು ಅವರ ಮೇಲೆ ಇರುವ ಗೌರವವಕ್ಕೆ ಸಾರ್ವಜನಿಕವಾಗಿ ಕುಂದು ಉಂಟಾಗಿದೆ.  ಸ್ವಾಮೀಜಿಯು ಆರೋಪ ಬಂದಾಗ  ತಾವಾಗಿಯೇ ಶರಣರಾಗಬೇಕಿತ್ತು, ಇಡೀ ಕರ್ನಾಟಕದ ಸ್ವಾಮಿಗಳ ಮಾನ ಮರ್ಯಾದೆ ತೆಗೆದು ರಾಜೀ ಸಂಧಾನಕ್ಕೆ ಯತ್ನಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಮುಖಂಡರಾದ ಬಸವರಾಜ್ ಹರಿಜನ, ಯಲ್ಲವ್ವ ಹರಿಜನ, ಗೋಪಾಲ ನಡಕಿನಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು