ಮುಂಡಗೋಡ:ಶಿರಶಿ ಶೈಕ್ಷಣಿಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ, ತಾಲ್ಲೂಕಿನ ಮೂರು ಜನ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಆಲಳ್ಳಿ ಶಾಲೆಯ ಶಿಕ್ಷಕಿ ರೂಪಾ ಆನಂದ ಶೆಟ್ಟಿ ಅವರಿಗೆ ಪ್ರಶಸ್ತಿ ಲಭಿಸಿದೆ. ಇವರು 17 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಟ್ಕಳ ತಾಲೂಕಿನಲ್ಲಿ ಪ್ರಥಮವಾಗಿ ಸೇವೆ ಸಲ್ಲಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಇಂದೂರಕೊಪ್ಪ ಶಾಲೆಯ ಗೀತಾ ಪಟಗಾರ ಅವರನ್ನು ಆಯ್ಕೆ ಮಾಡಲಾಗಿದೆ. ಕಳೆದ 26 ವರ್ಷಗಳಿಂದ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, 9ವರ್ಷಗಳ ಕಾಲ ಕೆಂದಲಗೇರಿ ಪ್ರಾಥಮಿಕ ಶಾಲೆ ಹಾಗೂ ಕಳೆದ 17ವರ್ಷದಿಂದ ಇಂದೂರಕೊಪ್ಪ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಮೈನಳ್ಳಿ ಪ್ರೌಢಶಾಲೆಯ ಗೋಪಾಲ ಕಾನಸೆ ಅವರನ್ನು ಆಯ್ಕೆ ಮಾಡಲಾಗಿದೆ.



ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು